ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ ಅವರು ಕರ್ನಾಟಕ ವಿಧಾನ ಸಭೆ ಚುನಾವಣೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಅವರು ಸಹ ಉಸ್ತುವಾರಿಗಳಾಗಿ ನೇಮಕವಾಗಿದ್ದಾರೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ