*Breaking News* *ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ ಅವರು ಕರ್ನಾಟಕ ವಿಧಾನ ಸಭೆ ಚುನಾವಣೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Home add -Advt

ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಅವರು ಸಹ ಉಸ್ತುವಾರಿಗಳಾಗಿ ನೇಮಕವಾಗಿದ್ದಾರೆ.  ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.

Related Articles

Back to top button