
ಪ್ರಗತಿವಾಹಿನಿ ಸುದ್ದಿ: ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಸಂಯೋಜಕರಾದ ನಾಗರಾಜ ನಾರ್ವೇಕರ ಇವರಿಗೆ ಆಂಧ್ರ ಪ್ರದೇಶ ಹಾಗೂ ಕೇರಳ ರಾಜ್ಯಗಳ ಹಿಂದುಳಿದ ವರ್ಗಗಳ ವಿಭಾಗದ ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ ಅವರು ದೆಹಲಿಯಲ್ಲಿ ನಡೆದ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತು ಆದೇಶ ಪತ್ರವನ್ನು ನಾಗರಾಜ ನಾರ್ವೇಕರ ಅವರಿಗೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ