Kannada NewsKarnataka NewsLatest

RCU ಸೇರಿ 4 ವಿವಿಗಳಿಗೆ ಕುಲಪತಿಗಳ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ 4 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿದ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡೀನ್ ಸಿ.ಎಂ.ತ್ಯಾಗರಾಜ ಅವರನ್ನು ಆರ್ ಸಿಯು ಕುಲಪತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಅವರ ಅವಧಿ 4 ವರ್ಷ.

ಮಂಗಳೂರು ವಿಶ್ವವಿದ್ಯಾಲಯಕ್ಕೆ ಅದೇ ವಿವಿಯ ಪಿ.ಎಲ್.ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಬಳ್ಳಾರಿ ವಿಶ್ವವಿದ್ಯಾಲಯಕ್ಕೆ ಹಂಪಿ ವಿಶ್ವವಿದ್ಯಾಲಯದ ಕೆ.ಎಂ.ಮೇತ್ರಿ ಅವರನ್ನು ನೇಮಕ ಮಾಡಲಾಗಿದೆ.

ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯಕ್ಕೆ ಹೈದರಾಬಾದ್ ವಿಶ್ವವಿದ್ಯಾಲಯದ ಶರತ್ ಅನಂತಮೂರ್ತಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related Articles

Back to top button