Belagavi NewsBelgaum NewsKannada NewsKarnataka NewsNationalPolitics
*ರಮೇಶ್ ಜಾರಕಿಹೊಳಿ ಪುತ್ರನ ಮೇಲೆ ಸೂಕ್ತ ಕ್ರಮ: ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ : ಜಾತ್ರೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗುಂಡು ಹಾರಿಸಿದ ಕೇಸ್ ನಲ್ಲಿ ಖಂಡಿತವಾಗಿಯು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ ಸ್ಥಳೀಯರು FIR ದಾಖಲಿಸಿದ್ದಾರೆ. ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಪೊಲೀಸರು ಅವರ ಕೆಲಸ ಮಾಡುತ್ತಾರೆ. ಯಾವುದೇ ಪ್ರಭಾವಗಳಿಗೆ ಒಳಗಾಗಲ್ಲ. ಯಾರೇ ಆದರೂ ಕಾನೂನಿಗಿಂತ ದೊಡ್ಡವರಲ್ಲ. ಈ ಕೇಸ್ ಸಂಬಂಧ ಪಾರದರ್ಶಕ ತನಿಖೆ ನಡೆಸಲಾಗುತ್ತದೆ. ಕಾನೂನು ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.