
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂದಿದ್ದು, ಕಳೆದ 24 ಗಂಟೆಯಲ್ಲಿ 2,47,417 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಸೋಂಕಿತರ ಪ್ರಮಾಣ ಶೇ 27ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿಗೆ 24 ಗಂಟೆಯಲ್ಲಿ 380 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 485035 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1117531 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 84825 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34715361 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ನಡುವೆಯೇ ರೂಪಾಂತರಿ ವೈರಸ್ ಕೂಡ ವ್ಯಾಪಕವಾಗಿ ಹರಡುತ್ತಿದ್ದು, ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 5488ಕ್ಕೆ ಏರಿಕೆಯಾಗಿದೆ.