Kannada NewsKarnataka NewsNationalPolitics
*ಸೊಳ್ಳೆ ನಾಶ ಹಾಗೂ ಡೆಂಘಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡುರಾವ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗಿದೆ. ಸೊಳ್ಳೆ ನಾಶ ಹಾಗೂ ಡೆಂಘಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.
ರಾಜ್ಯಾದ್ಯಂತ ಡೆಂಘಿ ಜ್ವರಕ್ಕೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗ ಸೋಮವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಡೆಂಘಿ ಸೋಂಕಿತರಿಗೆ ಸಂಪೂರ್ಣ ಚಿಕಿತ್ಸೆ ನೀಡಲಾಗುತ್ತಿದೆ. ಬೆಡ್ ಗಳ ವ್ಯವಸ್ಥೆ, ಪ್ಲೇಟ್ ಲೇಟ್ ಕೊರತೆಯಿರುವವರಿಗೆ ಹೆಚ್ಚು ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಎಲ್ಲೂ ಪ್ಲೇಟ್ ಲೆಟ್ ಗಳ ಕೊರತೆಯಿಲ್ಲ.
ಕಟ್ಟಡ ನಿರ್ಮಾಣ ಪ್ರದೇಶ, ಮನೆ ಸುತ್ತಮುತ್ತ ಶಾಲೆ ಸೇರಿ ಎಲ್ಲೂ ನೀರು ಶೇಖರಣೆ ಮಾಡಿಟ್ಟುಕೊಳ್ಳದಿರಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ