
ಪ್ರಗತಿವಾಹಿನಿ ಸುದ್ದಿ: ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮುಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಅರಬೈಲ್ ಘಾಟ್ ನಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ ಹಾಗೂ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಾಯಗೊಂಡಿದ್ದಾರೆ.
ಮೃತರನ್ನು ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳ ಮಗು ಶ್ರೀಹಾರ್ ಎಂದು ಗುರುತಿಸಲಾಗಿದೆ. ಕಾರು ಚಾಲಕ ಶ್ರೀಕಾಂತ್ ರೆಡ್ಡಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.