ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೋಮವಾರದಿಂದ 9, 10ನೇ ತರಗತಿ ಶಾಲೆಗಳು ಆರಂಭವಾಗುತ್ತಿದ್ದು, ಪೊಲೀಸ್ ಭದ್ರತೆಯಲ್ಲಿ ಶಾಲಾ-ಕಾಲೇಜು ಅರಂಭಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಶಾಲಾ-ಕಾಲೇಜು ಆರಂಭಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜು ಅರ್ಂಭಿಸಲಾಗುವುದು. ಸೋಮವಾರದಿಂದ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ ಎಂದರು.
ಈಗಾಗಲೇ ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದ್ದು, ಆ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಕೇಂದ್ರ ಪಡೆಗಳನ್ನು ಕೂಡ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ