Uncategorized

*ಯಾವುದೇ ಹುದ್ದೆ ಬೇಡಿಕೆ ಇಟ್ಟಿಲ್ಲ ಎಂದ ಮಾಜಿ ಸಚಿವ ಅರಗ ಜ್ಞಾನೇಂದ್ರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಮಾತನಾಡಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ , ಹೈಕಮಾಂಡ್ ಬಳಿ ನಾನು ಯಾವುದೇ ಹುದ್ದೆ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ನಡವಳಿಕೆ, ಶಕ್ತಿ ಬಗ್ಗೆ ತಿಳಿದುಕೊಂಡಿದೆ. ಈ ಹಿಂದೆ ಕೂಡ ಗೃಹ ಸಚಿವ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿರಲಿಲ್ಲ ಎಂದು ಹೇಳಿದರು.

ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ, ನೀಡದಿದ್ದರೂ ನಾನು ಪಕ್ಷದ ಕೆಲಸ ಮಾಡುತ್ತೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button