Kannada NewsKarnataka NewsLatestPolitics

*ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ತೀರ್ಥಹಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ಅಡಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ ಖಂಡ್ರೆ ಬಗ್ಗೆ ಅರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ದಲಿತ ಮುಖಂಡ ಹರ್ಷೇಂದ್ರ ಕುಮಾರ್, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಠಾಣೆಯಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದ್ದಾರೆ.

Home add -Advt

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ನಿಂದಿಸಿದ್ದರು ಎಂಬ ಆರೊಪ ಕೇಳಿಬಂದಿದೆ.


Related Articles

Back to top button