Kannada NewsLatest

ಭ್ರಷ್ಟರನ್ನು ಮಟ್ಟ ಹಾಕಿಯೇ ಅಧಿಕಾರದಿಂದ ವಿಶ್ರಾಂತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಜ್ಞೆ

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: PSI ಅಕ್ರಮ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಾನೂನಿನ ಕಕ್ಷೆಗೆ ತಂದು, ಭ್ರಷ್ಟರನ್ನು ಮಟ್ಟ ಹಾಕುವ ವರೆಗೂ, ವಿಶ್ರಮಿಸುವುದಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಗುಡುಗಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಇಂದು ನೂತನವಾಗಿ ನಿರ್ಮಿಸಲಾದ ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆ ಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಪಿಎಸೈ ಹಗರಣದ ತನಿಖೆ ಯಾವುದೇ ಹಸ್ತಕ್ಷೇಪ ಇಲ್ಲದೆ, ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.

Related Articles

ತನಿಖೆಯು ಅತ್ಯಂತ ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರು, ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ, ಸಿಐಡಿ ತನಿಖೆಗೆ ವಹಿಸಲಾದ ಹಲವಾರು ದೂರುಗಳ ಬಗ್ಗೆ FIR ದಾಖಲಾಗಿಲ್ಲ, FIR ಆದ ಪ್ರಕರಣ ಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ, ಆದರೆ ಪ್ರಾಮಾಣಿಕವಾಗಿ ತನಿಖೆ ಆಗುತ್ತಿರುವ PSI ವಿಷಯದಲ್ಲಿ ನಮ್ಮ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

ಬಿಜೆಪಿ ವಿರೋಧ ಪಕ್ಷವಾಗಿ ಕಡ್ಲೆಪುರಿ ತಿನ್ನುತ್ತಾ ಇದ್ದರಾ? ಎಂದ, ಸಿದ್ದರಾಮಯ್ಯ ನವರ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಸಚಿವರು ” ನಾವು ಕೇಳಿದ್ದೆವು, ಆದರೆ ಅವರು ಸ್ಪಂದಿಸಿರಲಿಲ್ಲ”. “ಹಾಗಾದರೆ ನಾವುಗಳು ಕೇಳದೇ ಇರುವುದನ್ನು, ಅವರು (ಸಿದ್ದರಾಮಯ್ಯ) ಕೇಸು ಗಳನ್ನು ಮುಚ್ಚಿ ಹಾಕುವುದಕ್ಕೆ ಸಿಕ್ಕಿದ ಪರವಾನಿಗೆ ಎಂದು ತಿಳಿದಿದ್ದರೇ ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವ ಸಿಐಡಿ ತನಿಖೆಯ ಹಳಿ ತಪ್ಪಿಸಿ, ಭ್ರಷ್ಟರ ರಕ್ಷಣೆಗೆ, ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

Home add -Advt

” ನನ್ನ ಹಾಗೂ ಮುಖ್ಯಮಂತ್ರಿಯವರ, ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ?” ಎಂದು ಸಚಿವರು ಪ್ರಶ್ನಿಸಿದರು.

ಲಾಲು ಪ್ರಸಾದ್ ಯಾದವ್ ದೇಹ ಲಾಕ್; ದೆಹಲಿಗೆ ಏರ್ ಲಿಫ್ಟ್
ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಹರ್ಷ ಸಹೋದರಿ ಗಂಭೀರ ಆರೋಪ

Related Articles

Back to top button