*ಕಾಂಗ್ರೆಸ್ ನಲ್ಲಿಯೇ ಗೊಂದಲವಿದೆ; ಸಚಿವರ ಹೇಳಿಕೆಯಿಂದಲೆ ಗೊತ್ತಾಗುತ್ತಿದೆ ಎಂದ ಮಾಜಿ ಸಚಿವ ಅರಗ ಜ್ಞಾನೇಂದ್ರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕರಣವಾಗಿದೆ.
ಅಧಿಕಾರ ಹಂಚಿಕೆ ಅಡಿಯಲ್ಲಿ ಸಿದ್ದರಾಮಯ್ಯ ಎರಡುವರೆ ವರ್ಷ ಹಾಗೂ ಡಿ.ಕೆ.ಶಿವಕುಮಾರ್ ಎರಡುವರೆ ವರ್ಷ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೈಕಮಾಂಡ್ ನಿರ್ಧಾರ ಮಾಡಿದಂತೆ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿ ಈಗ ಸಚಿವ ಸಂಪುಟ ವಿಸ್ತರಣೆವರೆಗೆ ಬಂದು ನಿಂತಿರುವಾಗ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆ ಗೊಂದಲಕ್ಕೆ ಕಾರಣವಾಗಿದೆ.
ಇದೇ ವಿಚಾರ ಈಗ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಲು ಅಸ್ತ್ರವಾದಂತಾಗಿದೆ. ಮುಖ್ಯಮಂತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕರಲ್ಲಿಯೇ ಗೊಂದಲವಿದೆ ಎಂಬುದು ಸಚಿವರ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಪೂರ್ಣಪ್ರಮಾಣದಲ್ಲಿ ಸಚಿವ ಸಂಪುಟವೇ ಇನ್ನೂ ವಿಸ್ತರಣೆ ಆಗಿಲ್ಲ ಎಂದ ಟೀಕಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ