Latest

ಶಾಸಕರ ಕುಟುಂಬವೇ ಮತಾಂತರಕ್ಕೆ ಒಳಗಾಗಿರುವುದು ವಿಪರ್ಯಾಸ; ಗೃಹ ಸಚಿವ ಅರಗ ಜ್ಞಾನೇಂದ್ರ

ಪ್ರಗತಿವಾಹಿನಿ ಸುದ್ದಿ; ಹಾಸನ: ಮತಾಂತರದಿಂದಾಗಿ ರಾಜ್ಯಾದ್ಯಂತ ಕೋಮು ಗಲಭೆಗಳು ನಡೆಯುತ್ತಿವೆ. ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಹಳೆಬೀಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮತಾಂತರಕ್ಕೆ ಶಾಸಕರ ಕುಟುಂಬ ಒಳಗಾಗಿರುವುದು ವಿಪರ್ಯಾಸ. ತಾಯಿ ಮತಾಂತರದಿಂದ ಶಾಸಕರಾಗಿರುವ ಮಗನೇ ಬೆರಗಾಗುವ ಸ್ಥಿತಿ ಬಂದಿದೆ ಎಂದು ಹೇಳುವ ಮೂಲಕ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಮತಾಂತರದ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು.

ಮತಾಂತರ ನಿಷೇಧ ಕುರಿತು ಕಾನೂನು ರಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರಲಾಗುವುದು ಎಂದು ಹೇಳಿದರು.

ಟಾಟಾ ಗ್ರೂಪ್ ಪಾಲಾದ ಏರ್ ಇಂಡಿಯಾ

Home add -Advt

Related Articles

Back to top button