ಪ್ರಗತಿವಾಹಿನಿ ಸುದ್ದಿ: ದೆಹಲಿ ಮಾಜಿ ಸಿಎಂ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಆಮ್ ಆದ್ಮಿ ಪಕ್ಷದ 16 ಶಾಸಕರನ್ನು ಖರೀದಿಸಲು ಬಿಜೆಪಿ ಆಮಿಷವೊಡ್ಡಿದೆ. ಆಪ್ ನ 16 ಶಾಸಕರಿಗೆ 15 ಕೋಟಿ ಆಮಿಷವೊಡ್ಡಲಾಗಿದೆ. ಈ ಮೂಲಕ ಬಿಜೆಪಿ ಆಪರೇಶನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.
ಅರವಿಂದ್ ಕೇಜ್ರಿವಾಲ್ ಆರೋಪಕ್ಕೆ ಬಿಜೆಪಿ ಲೆಫ್ಟಿನೆಂಟ್ ಗವರ್ನರ್ ಗೆ ದೂರು ನೀಡಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಆದೇಶ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ