Kannada NewsKarnataka NewsLatest

ಬಿಜೆಪಿ ಅಂಗಳಕ್ಕೆ ಜಿಗಿದ ಅರವಿಂದ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಜೊತೆ ಕಾಣಿಸಿಕೊಳ್ಳುತ್ತಿದ್ದ ಅರವಿಂದ ಪಾಟೀಲ ಬಿಜೆಪಿ ಸೇರುವುದು ಖಚಿತವಾಗಿತ್ತು. ಸೋಮವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ  ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಟ್ಟಾ ಬೆಂಬಲಿಗರಾಗಿರುವ ಅರವಿಂದ ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು ಸಮ್ಮುಖದಲ್ಲಿ ಬಿಜೆಪಿ ಧ್ವಜ ಹಿಡಿದರು.

ಲಕ್ಷ್ಮಣ ಸವದಿ, ಶಾಸಕರಾದ ಮಹಾಂತೇಶ ದೊಡ್ಡಗೌಡರ್, ದುರ್ಯೋಧನ ಐಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಇದ್ದರು.

Home add -Advt

ಅರವಿಂದ ಪಾಟೀಲ ಒಂದು ಅವಧಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

GOOD NEWS: ಬೆಳಗಾವಿಯಲ್ಲಿ ಕೊರೋನಾ ದಿಢೀರ್ ಭಾರೀ ಇಳಿಕೆ

 

Related Articles

Back to top button