ಪ್ರಗತಿವಾಹಿನಿ ಸುದ್ದಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಇಡಿ ಪ್ರಕರಣದ ಬೆನ್ನಲ್ಲೇ ಇದೀಗ ಸಿಬಿಐ ಪ್ರಕರಣದಲ್ಲಿಯೂ ಜಾಮೀನು ಮಂಜೂರಾಗಿದೆ.
ಸಿಬಿಐ ನಿಂದ ಬಂಧಿಸಲ್ಪಟ್ಟಿದ್ದ ಕೇಜ್ರಿವಾಲ್, ತಿಹಾರ್ ಜೈಲು ಸೇರಿದ್ದರು. ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದ್ವಿಸದಸ್ಯ ಪೀಠ, ಇಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ವಿಚಾರಣೆಗೆ ಕೇಜ್ರಿವಾಲ್ ಖುದ್ದು ಹಾಜರಾಗಬೇಕು. ಪ್ರಕರಣದ ಬಗ್ಗೆ ಕೇಜ್ರಿವಾಲ್ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ. 10 ಲಕ್ಷ ಮೌಲ್ಯದ 2 ಬಾಂಡ್ ಸೇರಿದಂತೆ ವಿವಿಧ ಷರತ್ತು ವಿಧಿಸಲಾಗಿದೆ.
ಇಂದು ಸಂಜೆ ವೇಳೆಗೆ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಈ ಮೂಲಕ 6 ತಿಂಗಳ ಬಳಿಕ ಕೇಜ್ರಿವಾಲ್ ಜೈಲಿನಿಂದ ಹೊರಬರಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ