ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಡಿಕೆ ಆರೋಗ್ಯಕ್ಕೆ ಹಾನಿಕರ, ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಅಡಿಕೆ ಬೆಳಗಾರರ ನಿದ್ದೆ ಕೆಡಿಸಿತ್ತು. ಇದೀಗ ಗೃಹ ಸಚಿವ ಅರಗ ಜ್ಞಾನೆಂದ್ರ ಅಡಿಕೆ ಬೆಳೆಗಾರರಿಗೆ ನಿಟ್ಟುಸಿರು ಬಿಡುವ ಸುದ್ದಿಯೊಂದನ್ನು ತಿಳಿಸಿದ್ದು, ಅಡಿಕೆ ನಿಷೇಧ ಮಾಡದಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಡಿಕೆ ದೇಹಕ್ಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಆರೋಗ್ಯಕಾರಿ ಅಂಶಗಳಿವೆ ಎಂದು ಕರ್ನಾಟಕದ ಅಧಿಕಾರಿಗಳು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧಿಕಾರಿಗಳಿಂದಲು ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸಿದ್ದು, ಅಡಿಕೆ ಬೆಳೆಗಾರರು ಭಯಪಡುವ ಅಗತ್ಯವಿಲ್ಲ ಎಂದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಡಿಕೆ ಹಾನಿಕಾರಕ ಎಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿತ್ತು. ಅಫಿಡವಿಟ್ ತೆರವಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಅಡಿಕೆ ನಿಷೇಧದ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ