Kannada NewsLatest

ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ

ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ – ಅಗಸಗಿ : ಯಮಕನಮರಡಿ ಮತಕ್ಷೇತ್ರದ ಬೆಳಗಾವಿ ತಾಲೂಕಿನಲ್ಲಿ ಬಾರಿ ಮಳೆಯಿಂದಾಗಿ ಹಾನಿಗೊಳಗಾದ  ಅಗಸಗಿ,ಅಲತಗಾ, ಜಾಫರವಾಡಿ ಮತ್ತು ಕಡೋಲಿ ಗ್ರಾಮಗಳಿಗೆ ಮಾಜಿ ಸಚಿವ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಭೇಟಿ ನೀಡಿ ಸಂಕಷ್ಟಕ್ಕೊಳಗಾದ ನಿರಾಶ್ರಿತರಗೆ ಸಾಂತ್ವನ ಹೇಳಿ ಪರಿಹಾರ ನಿಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ  ಮಳೆಯಿಂದಾಗಿ ಕುಸಿದು ಬಿದ್ದಿರುವ ಮನೆಗಳಿಗೆ ಭೇಟಿ ನೀಡಿ, ಮನೆ ಪುನರ್ನಿರ್ಮಾಣಕ್ಕೆ ಸರಕಾರ ಸಂಪೂರ್ಣವಾಗಿ ಸ್ಪಂದಿಸಲಿದ್ದು  ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಸಮಾಧಾನ ಹೇಳಿದರು. ತ್ವರಿತವಾಗಿ ಪರಿಹಾರ ನೀಡಲು ಸಾಧ್ಯವಾಗದಿದ್ದರೂ ಗ್ರಾಮ ಪಂಚಾಯಿತಿ ವತಿಯಿಂದ ಆಶ್ರಯ ಮನೆಗಳನ್ನು ಮಂಜೂರು ಮಾಡಿ ಕುಸಿದಿರುವ ಮನೆಗಳನ್ನು ಪುನರ್ನಿರ್ಮಾಣ ಮಾಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸೂಚಿಸಿದರು.

Home add -Advt

ಈ ಸಂದರ್ಭದಲ್ಲಿ ಅಗಸಗಿ ಗ್ರಾ ಪಂ ಅಧ್ಯಕ್ಷೆ ಶೋಭಾ ಕುರೇನ್ನವರ, ಜಿ ಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಅಪ್ಪಯ್ಯಗೌಡ ಪಾಟೀಲ , ಮುಖಂಡರಾದ ಕಲಗೌಡಾ ಪಾಟೀಲ, ಗುಂಡು ಕುರೆನ್ನವರ, ಅಮೃತ ಮುದ್ದಣ್ಣವರ, ಸಂಜಯಗೌಡ ಪಾಟೀಲ, ಸುಧೀರ ಗಡಕರಿ, ಸಂತೋಷ ಲಾಡ ಸೇರಿದಂತೆ ಅನೇಕ ಮುಖಂಡರು, ಗ್ರಾ ಪಂ ಸದಸ್ಯರು ಉಪಸ್ಥಿತರಿದ್ದರು.////

Related Articles

Back to top button