ಸಂಸತ್ತಿನಿಂದ ಆದೇಶ ಬಂದರೆ ಪಿಓಕೆ ವಶಪಡಿಸಿಕೊಳ್ಳಲು ಸಿದ್ಧ: ಜನರಲ್ ಎಂ ಎಂ ನರವಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಡೀ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂಬುದು ಸಂಸತ್ತಿನ ನಿರ್ಣಯವಾಗಿದೆ. ಹಾಗಾಗಿ ಸಂಸತ್ತಿನಿಂದ ಆದೇಶ ಕೊಟ್ಟರೆ ಪಾಕಿಸ್ತಾನ ಆಕ್ರಮಿತ-ಕಾಶ್ಮೀರ (ಪಿಓಕೆ) ವಶಕ್ಕೆ ಪಡೆಯಲು ಸೇನೆ ಸಿದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಮ್ಮು ಮತ್ತು ಕಾಶ್ಮೀರವು ಭಾರತದ ಭಾಗವಾಗಿದೆ ಎಂಬುದು ಸಂಸತ್ತಿನ ನಿರ್ಣಯವಾಗಿದೆ. ಹೀಗಾಗಿ ಪಿಓಕೆ ನಮಗೆ ಸೇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸೈನ್ಯಕ್ಕೆ ಆದೇಶ ಸಿಕ್ಕರೆ ಪಿಓಕೆಯಲ್ಲಿ ಕಾರ್ಯಾಚರಣೆ ನಡೆಸಿ ಆ ಪ್ರದೇಶವನ್ನು ವಶಕ್ಕೆ ಪಡೆದುಕೊಳ್ಳಲಾಗುವುದು. ಭಾರತೀಯ ಸೇನೆಯು ಮೊದಲಿಗಿಂತ ಈಗ ಉತ್ತಮವಾಗಿ ತಯಾರಾಗಿದೆ ಎಂದು ತಿಳಿಸಿದರು.

ಸಂವಿಧಾನವು ನಮ್ಮ ಎಲ್ಲಾ ಕಾರ್ಯಗಳಲ್ಲಿ ಹಾಗೂ ಎಲ್ಲಾ ಸಮಯದಲ್ಲೂ ಮಾರ್ಗದರ್ಶನ ನೀಡುತ್ತದೆ. ಸಂವಿಧಾನದಲ್ಲಿ ಪ್ರತಿಪಾದಿಸಿದಂತೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವು ಅಧಿಕಾರಿಗಳಿಗೆ ಹಾಗೂ ಯೋಧರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಭವಿಷ್ಯದ ಯುದ್ಧಗಳಿಗೆ ಸಶಸ್ತ್ರ ಪಡೆಗಳನ್ನು ಸಿದ್ಧಪಡಿಸುವುದು, ತರಬೇತಿ ನೀಡುವುದು ಮುಖ್ಯ ಉದ್ದೇಶವಾಗಿದೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ರಚನೆ ಮತ್ತು ಮಿಲಿಟರಿ ವ್ಯವಹಾರಗಳ ಇಲಾಖೆಯನ್ನು ರಚಿಸುವುದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

Home add -Advt

Related Articles

Back to top button