
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ದಟ್ಟಕಾನನದಲ್ಲಿ ಪಾನಗೊಂಡಿದ್ದು, ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 12:20ರ ವೇಳೆಗೆ ಭಯಂಕರ ಶಬ್ಧದೊಂದಿಗೆ ಹೆಲಿಕಾಪ್ಟರ್ ಮರಕ್ಕೆ ಅಪ್ಪಳಿಸಿದೆ. ಅಲ್ಲಿಂದ ಬೆಂಕಿಯ ಉಂಡೆ ಹೊರಹೊಮ್ಮಿದೆ. ನೋಡ ನೋಡುತ್ತಿದ್ದಂತೆ ಮತ್ತೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಹೊಡೆದಿದೆ. ಹೆಲಿಕಾಪ್ಟರ್ ನಲ್ಲಿದ್ದವರು ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬೀಳಲಾರಂಭಿಸಿದ್ದಾರೆ. ಭಯಂಕರ ಶಬ್ಧ…ಬೆಂಕಿಯ ಕೆನ್ನಾಲಿಗೆ…ಸುತ್ತಮುತ್ತಲಿನ ಜನರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ತಕ್ಷಣ ಪೊಲೀಸರಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದೇವೆ ಎಂದು ಭಯಂಕರ ಸನ್ನಿವೇಶದ ಬಗ್ಗೆ ವಿವರಿಸಿದ್ದಾರೆ.
ಸುಲೂರಿನಿಂದ ವೆಲ್ಲಿಂಗ್ಟನ್ ನತ್ತ ತೆರಳುತ್ತಿದ್ದ ವೇಳೆ ಕುನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದೆ. 11 ಮೃತದೇಹಗಳು ದುರಂತದ ಸ್ಥಳದಲ್ಲಿ ಅಲ್ಲಲ್ಲಿ ಪತ್ತೆಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದು, ಈ ಮೂಲಕ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ. ಓರ್ವ ಗಾಯಾಳು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ದುರ್ಮರಣ