ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಏರ್ ಫೋರ್ಸ್ ಅಧಿಕೃತ ಮಾಹಿತಿ ನೀಡಿದೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿ ದಟ್ಟಕಾನನದಲ್ಲಿ ಪತನಗೊಂಡಿತ್ತು. ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ಐಎ ಎಫ್ ಸ್ಪಷ್ಟಪಡಿಸಿದೆ.
ಈ ಕುರಿತು ಟ್ವಿಟರ್ ನಲ್ಲಿ ಅಧಿಕೃತ ಮಾಹಿತಿ ನೀಡಿರುವ ಐಎ ಎಫ್, ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಆಸ್ಪರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳಿದ್ದಾರೆ. ಬಿಪಿನ್ ರಾವತ್ ಭಾರತೀಯ ಸೇನೆಯ ಮೊದಲ ಸಿಡಿಎಸ್ ಆಗಿ ನೇಮಕಗೊಂಡಿದ್ದರು. ರಾವತ್ ಸಾವಿನಿಂದಾಗಿ ಭಾರತೀಯ ಸೇನೆಯ ರಕ್ಷಾಣಾ ಕವಚವೇ ಕಳಚಿದಂತಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ವರುಣ್ ಸಿಂಗ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ವರುಣ್ ಸಿಂಗ್ ಶೇ.80ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸೇನಾ ಹೆಲಿಕಾಪ್ಟರ್ ದುರಂತ; ಸಾವಿನ ಸಂಖ್ಯೆ 13ಕ್ಕೇರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ