ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಮಿಳಿನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡುಯರ್ ಎಲ್.ಎಸ್.ಲಿಡ್ಡೆರ್, ಲೆ.ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ Mi-17V5 ಹೆಲಿಕಾಪ್ಟರ್ ಊಟಿ ಬಳಿ ಪತನಗೊಂಡಿದೆ. ದುರಂತದಲ್ಲಿ 11 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕೋಯಮತ್ತೂರ್ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲೆಂದು ಬಿಪಿನ್ ರಾವತ್ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ್ದರು. ಕನ್ನೂರು ಸೇನಾನೆಲೆಯಿಂದ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಪತನಗೊಂಡಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿದಂತೆ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾವತ್ ಪತ್ನಿ ಮಧುಲಿಕಾ ಸಾವಿಗೀಡಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಇನ್ನಷ್ಟೆ ಖಚಿತವಾಗಬೇಕಿದೆ.
ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ