ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಹೆಲಿಕಾಪ್ಟರ್ ದುರಂತ ಪ್ರಕರಣಗಳು ಸಂಭವಿಸುತ್ತಿವೆ. ಸೇನಾ ಹೆಲಿಕಾಪ್ಟರ್ ಒಂದು ಪತನಗೊಂಡಿರುವ ಘಟನೆ ಗುಜರಾತ್ ನ ಪೋರ್ ಬಂದರ್ ನಲ್ಲಿ ನಡೆದಿದೆ.
ನೌಕಾಪಡೆಯ ಹೆಲಿಕಾಪ್ಟರ್ ಏಕಾಏಕಿ ಪತನಗೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ