
ಪ್ರಗತಿವಾಹಿನಿ ಸುದ್ದಿ; ಲಕ್ನೋ: ಸೇನಾಧಿಕಾರಿಯೊಬ್ಬರು ತನ್ನ ಸ್ನೇಹಿತನ ಪತ್ನಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕರ್ನಲ್ ದರ್ಜೆಯ ಸೇನಾಧಿಕಾರಿ ಮೆಸ್ ಒಂದರಲ್ಲಿ ಈ ಕೃತ್ಯವೆಸಗಿದ್ದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಸೇನಾಧಿಕಾರಿ ವಿರುದ್ಧ ಆರೋಪ ಸಾಬೀತಾದರೆ ಅಧಿಕಾರಿಯನ್ನು ಬಂಧಿಸುವ ಸಾಧ್ಯತೆಯಿದೆ.