Kannada NewsKarnataka NewsPolitics

*ಮೈಸೂರು ದಸರಾದಲ್ಲಿ ನಡೆಯಲಿದೆ ಸೇನಾ ಪರೇಡ್, ಏರ್ ಶೋ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನವದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಮಹತ್ವದ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಈ ವೇಳೆ ಮುಂಬರುವ ಮೈಸೂರು ದಸರಾದಲ್ಲಿ ಏರ್ ಶೋ ಜೊತೆಗೆ ಸೇನಾ ಪರೇಡ್ ನಡೆಸಲು ಕೇಂದ್ರ ಸರ್ಕಾರದ ಅನುಮತಿ ಕೋರಿದರು. ದಸರಾ ಕಾರ್ಯಕ್ರಮದಲ್ಲಿ ಮೂರು ಸೇನಾ ಪಡೆಗಳೂ ಭಾಗವಹಿಸುವಂತೆ ಮನವಿ ಮಾಡಿದ್ದು, ಇದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ಬಾರಿ ಮೈಸೂರು ದಸರಾದಲ್ಲಿ ವಿಶೇಷವಾಗಿ ಸೇನಾ ಪರೇಡ್ ಆಯೋಜಿಸಲು ನಿರ್ಧರಿಸಲಾಗಿದೆ. 

ಪರೇಡ್‌ನಲ್ಲಿ ಮೂರು ಸೇನಾ ಪಡೆಗಳು ಭಾಗವಹಿಸಬೇಕು ಎಂದು ಮನವಿ ಮಾಡಿದ್ದೇನೆ. ಇದಕ್ಕೆ ರಕ್ಷಣಾ ಸಚಿವರು ಸಮ್ಮತಿ ನೀಡಿದ್ದಾರೆ ಎಂದರು.

ಹೀಗಾಗಿ ಈ ಬಾರಿಯ ಮೈಸೂರು ದಸರಾದಲ್ಲಿ ಸೇನಾ ಪರೇಡ್ ಹಾಗೂ ಏರ್ ಶೋ ಎರಡೂ ನಡೆಯಲಿದ್ದು, ದಸರಾ ಕಾರ್ಯಕ್ರಮಕ್ಕೆ ಮತ್ತಷ್ಟು ವಿಶೇಷ ಮೆರುಗು ಬರಲಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button