*ಬೆಳಗಾವಿ: ಆರ್ಮಿ ನೇಮಕಾತಿಗೆ ಓಪನ್ ರ್ಯಾಲಿ: ನೂಕುನುಗ್ಗಲು, ಕಾಲ್ತುಳಿತ; ಇಬ್ಬರು ಯುವಕರಿಗೆ ಗಾಯ*
ಪೊಲೀಸರಿಂದ ಲಘು ಲಾಠಿ ಪ್ರಹಾರ
ಪ್ರಗತಿವಾಹಿನಿ ಸುದ್ದಿ: ಆರ್ಮಿ ನೇಮಕಾತಿಗಾಗಿ ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಓಪನ್ ರ್ಯಾಲಿ ಆಯೋಜಿಸಲಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಯುವಕರ ದಂಡೆ ಹರಿದು ಬಂದಿದೆ.
ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಸುಮಾರು 30,000ಕ್ಕೂ ಹೆಚ್ಚು ಯುವಕರು ಆಗಮಿಸಿದ್ದು, ಆರ್ಮಿ ಸೆಲೆಕ್ಷನ್ ಗಾಗಿ ಕಾದು ಕುಳಿತಿದ್ದಾರೆ. ಅಪಾರಸಂಖ್ಯೆಯಲ್ಲಿ ನೇಮಕಾತಿಗಾಗಿ ಅಭ್ಯರ್ಥಿಗಳು ಆಗಮಿಸಿರುವುದರಿಂದ ನೂಕಾಟ-ತಳ್ಳಾಟ ನಡೆದಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಅಲ್ಲಾಭಕ್ಷ ಯರಗಟ್ಟಿ ಹಾಗೂ ಗೊಕಾಕ್ ತಾಲೂಕಿನ ಬೆಟಗೇರಿ ಗ್ರಾಮದ ಪ್ರವೀಣ್ ಮಕಾಳೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೂಕುನುಗ್ಗಲು ನಿಯಂತ್ರಿಸಲು ಪೊಲೀಸರು, ಸೈನಿಕರು ಹರಸಾಹಸಪಟ್ಟಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಯುವಕರ ಗುಂಪು ಚದುರಿಸಲು ಲಾಠಿ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ