ಪ್ರಗತಿವಾಹಿನಿ ಸುದ್ದಿ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಅಪಘಾತ ಮುಂದುವರೆದಿದೆ. ಬಂಡಿಪೋರಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಉತ್ತರ ಕಾಶ್ಮೀರ ಜಿಲ್ಲೆಯ ಎಸ್ ಕೆ ಪಾಯನ್ ಬಳಿ ಈ ಘಟನೆ ನಡೆದಿದೆ.
ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಸ್ಕಿಡ್ ಆಗಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಸೇನೆಯ ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಹಿತಿ ಹಂಚಿಕೊಂಡಿತ್ತು. ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಜನರ ನೆರವಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕಳೆದ ವಾರವಷ್ಟೇ ಸೇನಾ ವಾಹನವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಐದು ಮಂದಿ ಯೋಧರು ಹುತಾತ್ಮರಾಗಿದ್ದರು.ಭಾರತೀಯ ಯೋಧರ ಸಾವಿಗೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ