ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಯೋಧ ಸೇರಿ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ರಕ್ಷಣಾ ಸಿಬ್ಬಂದಿ ಐವರು ಮೃತ ಯೋಧರ ಶವಗಳನ್ನು ಹೊರತೆಗೆದಿದ್ದು ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.ವಾಹನದಲ್ಲಿ ಹತ್ತು ಸೈನಿಕರಿದ್ದು, ಐವರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ಲೋಯಿ ಬಳಿ ಸೇನಾ ವಾಹನವೊಂದು ದಾರಿ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಇದರಲ್ಲಿದ್ದ 5 ಸೈನಿಕರು ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಸುಮಾರು 100-150 ಅಡಿ ಆಳದ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದ್ದು, ಮಾಹಿತಿ ಬಂದ ತಕ್ಷಣ ತುರ್ತು ರೆಸ್ಪಾನ್ಸ್ ಟೀಮ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ