
ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಪರಿಣಾಮ ಅರ್ನಬ್ ಚಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತ ಕೆಲವೇ ಗಂಟೆಗಳಲ್ಲಿ ನಾಲ್ಕು ರಾಜ್ಯಗಳಿಗೆ ಅಪ್ಪಳಿಸಲಿದ್ದು, ಅಲ್ಲೋಲಕಲ್ಲೋಲ ಸೃಷ್ಟಿಸಲಿದೆ ಎಂದು ಹಾವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರ್ನಬ್ ಚಂಡಮಾರುತ ಅಕ್ಟೋಬರ್ .28ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ನಾಲ್ಕು ರಾಜ್ಯಗಳಲ್ಲಿ ಬ್ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಆಂಧ್ರ, ಒಡಿಶಾ, ತೆಲಂಗಾಣ, ಛತ್ತೀಸ್ಗಢ ಮತ್ತು ಪುದುಚೇರಿ ಭಾಗದಲ್ಲಿ ಭಾರಿ ಮಳೆ ಸಂಭವಿಸುವ ಕುರಿತು ಅಲ್ಲಿನ ಸರ್ಕಾರಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭೀಕರ ಚಂಡಮಾರುತ ಅಪ್ಪಳಿಸುವ ಹಿನ್ನಲೆಯಲ್ಲಿ ಅಪಾಯವನ್ನು ಎದುರಿಸಲು ಈ ರಾಜ್ಯಗಳು ಸಿದ್ದತೆ ನಡೆಸುತ್ತಿದ್ದು, ಆಂಧ್ರದ ಕರಾವಳಿ ತೀರ ಹಾಗೂ ತಗ್ಗು ಪ್ರದೇಶಗಳ 89,000 ಜನರನ್ನು ಸುರಕ್ಷಿತ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕ್ರಮಕ್ಕೆ ಮುಂದಾಗಿದೆ.
ಈ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ನಿರ್ವಹಿಸಲು NDRF, SDRF ಹಾಗೂ ರಕ್ಷಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅ.29ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಚಂಡಮಾಅರುತದ ಪರಿಣಾಮ ತಮಿಳುನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ, ಮಧ್ಯ ಹಾಗೂ ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಅರ್ನಬ್’ ಚಂಡಮಾರುತ ಅ.27ರಂದು ಸ್ವಲ್ಪ ಮಟ್ಟಿಗೆ ತೀವ್ರತೆ ಪಡೆಯುತ್ತಿದ್ದು, ಅ.28ರಂದು ಆಂಧ್ರಪ್ರದೇಶದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ಕರಾವಳಿ ನಡುವಿನ ಯಾನಂ ಬಳಿ ಅಪ್ಪಳಿಸಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳು ಮತ್ತು ಪುದುಚೇರಿಯಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಿರುವ ಕೇಂದ್ರ ಸರ್ಕಾರ ಜನರ ರಕ್ಷಣೆ ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ತಡೆಯಲು ಸಜ್ಜಾಗುವಂತೆ ತಿಳಿಸಿದೆ.
ಹವಾಮಾನ ಇಲಾಖೆ ಪ್ರಕಾರ ಮಂಗಳವಾರ ಮುಂಜಾನೆ ವೇಳೆಗೆ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 115-125 ಕಿ.ಮೀ. ತಲುಪಲಿದ್ದು, ತೀವ್ರ ಸ್ವರೂಪ ಪಡೆದುಕೊಂಡಾಗ ಗಂಟೆಗೆ 140 ಕಿ.ಮೀ.ಗೆ ತಲುಪಬಹುದು ಎಂದು ಅಂದಾಜಿಸಿದೆ. ಪರಿಣಾಮ ಕರಾವಳಿ ತೀರಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಸಂಭವನೀಯ ಪರಿಸ್ಥಿತಿ ನಿರ್ವಹಿಸಲು ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಛತ್ತೀಸ್ಗಢ, ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ಪ್ರಕ್ಷುಬ್ಧ ಸನ್ನಿವೇಶ ಎದುರಿಸಲು ಹೆಚ್ಚುವರಿ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸೇನೆ, ನೌಕಾಪಡೆ, ವಾಯುಪಡೆ, ಭಾರತೀಯ ಕರಾವಳಿ ರಕ್ಷಣಾ ಪಡೆಯ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಅ.29ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




