ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದಿದ್ದಾರೆ.
ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ