
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಸರಾ ಹಬ್ಬದ ಪ್ರಯುಕ್ತ ವಾ.ಕ.ರ.ಸಾ ಸಂಸ್ಥೆಯು ಅ.10 ರಿಂದ 12 ರವರೆಗೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗಾವಿ ಕಡೆಗೆ ವಿವಿಧ ಮಾದರಿಯ ಎಸಿ, ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ವೇಗದೂತ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಅದರಂತೆ ಹಬ್ಬದ ನಂತರ ಅ.13 ರಂದು ಮರಳಿ ಬೆಂಗಳೂರಿಗೆ ಪ್ರಯಾಣಿಸಲು ಬೆಳಗಾವಿ ಹಾಗೂ ವಿಭಾಗದ ತಾಲೂಕಾ ಪ್ರದೇಶಗಳಾದ ಬೈಲಹೊಂಗಲ ಮತ್ತು ಖಾನಾಪೂರಗಳಿಂದ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಂಗಡ ಟಿಕೇಟ್ ಕಾಯ್ದಿರಿಸಲು ಇ-ಟಿಕೇಟನ್ನು ಆನ್‌ಲೈನ್ www.ksrtc.in www.nwkrtc.in ಮೂಲಕ ಅಥವಾ ಮೊಬೈಲ್ ಮುಖಾಂತರ ಪಡೆಯಬಹುದಾಗಿದೆ. ಅಲ್ಲದೆ ಸಂಸ್ಥೆಯಿಂದ ನಿಗದಿಪಡಿಸಿರುವ ಬೆಳಗಾವಿ ವಿವಿಧ ಸ್ಥಳದಲ್ಲಿರುವ ಸಂಸ್ಥೆಯ ಅವತಾರ ಬುಕ್ಕಿಂಗ್ ಏಜಂಟರಲ್ಲಿಯೂ ಮುಂಗಡ ಟಿಕೇಟ ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ವಾಕರಸಾ ಸಂಸ್ಥೆಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ