Kannada NewsKarnataka NewsNationalPolitics

*ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರದ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಿವಂಗತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಪೂರ್ಣಿಮಾ ಥಿಯೇಟರ್ ರಸ್ತೆ ಹಾಗೂ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಮುಖ್ಯ ಪ್ರವೇಶ ದ್ವಾರದ ಮೂಲಕ ಒಳಗೆ ಬಂದು ಅಂತಿಮ ದರ್ಶನ ಪಡೆದ ನಂತರ. ಟೌನ್ ಹಾಲ್ ಗೇಟ್ ಮೂಲಕ ಹೊರಗೆ ಹೋಗಲು ಅವಕಾಶ ಕಲ್ಪಿಸಿದೆ.

ಸಾಹಿತಿ ಎಸ್ ಎಲ್ ಭೈರಪ್ಪ ತಮ್ಮ ಹುಟ್ಟೂರಿನಲ್ಲಿ ಮಣ್ಣಾಗಬೇಕೆಂದು ಬಯಸಿದ್ದರು. ಅದೇ ಕಾರಣಕ್ಕೆ ಸಂತೆಶಿವರದಲ್ಲೇ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಂತೆಶಿವರದಲ್ಲಿ ಅಂತ್ಯಕ್ರಿಯೆ ನಡೆಸುತ್ತಿಲ್ಲ. 

Home add -Advt

Related Articles

Back to top button