Latest

ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಕೋಳಿ ಮಾಂಸ ಕಟ್ಟಿ ಮಾರಾಟ; ಅನ್ಯಧರ್ಮೀಯನ ಬಂಧನ

ಪ್ರಗತಿವಾಹಿನಿ ಸುದ್ದಿ, ಲಕ್ನೋ: ಹಿಂದೂ ದೇವತೆಗಳ ಚಿತ್ರಗಳಿರುವ ಕಾಗದದಲ್ಲಿ ಕೋಳಿ ಮಾಂಸ ಕಟ್ಟಿ ಕೊಡುತ್ತಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಾಲಿಬ್ ಹುಸೇನ್ ಎಂಬಾತ ಬಂಧಿತ. ಈತ ಚಿಕನ್ ಅಂಗಡಿ ನಡೆಸುತ್ತಿದ್ದ ಹಿಂದೂ ದೇವತೆಗಳ ಚಿತ್ರವಿರುವ ಕಾಗದಗಳನ್ನು ಚಿಕನ್ ಕಟ್ಟಿಕೊಡಲು ಬಳಕೆ ಮಾಡುತ್ತಿದ್ದ. ಈತನ ವಿರುದ್ಧ ಕೆಲವರು ಧಾರ್ಮಿಕ ಅವಹೇಳನದ ಮಾಡಿದ್ದಾಗಿ ಕೇಸು ದಾಖಲಿಸಿದ್ದರು.

ದೂರಿನ ಆಧಾರದಲ್ಲಿ ಈತನ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ ಎಂದು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ. ಪೊಲೀಸರು ತಾಲಿಬ್ ಹುಸೇನ್ ವಿಚಾರಣೆ ನಡೆಸುತ್ತಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್; ಆಪ್ತ ಮಹಾಂತೇಶ್ ಪತ್ನಿ ವನಜಾಕ್ಷಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button