ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ Narendra Modi ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ.
ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ