Latest

ಲಂಚ ಪಡೆಯುತ್ತಿದ್ದ ಆರೋಗ್ಯ ಅಧೀಕ್ಷಕನ ಬಂಧನ

ಪ್ರಗತಿವಾಹಿನಿ ಸುದ್ದಿ, ಚೆನ್ನೈ: ನರ್ಸಿಂಗ್ ವಿದ್ಯಾರ್ಥಿಗಳನ್ನು ತರಬೇತಿಗೆ ಕಳುಹಿಸಲು ಲಂಚ ಪಡೆದಿದ್ದ ಆರೋಗ್ಯ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ.

ತಮಿಳುನಾಡಿನ ವೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ವಿಜಿಲೆನ್ಸ್‌ ಗೆ ಬಂದ ನರ್ಸಿಂಗ್ ಸಂಸ್ಥೆಯೊಂದರ ದೂರು ಆಧರಿಸಿ ಜಿಲ್ಲಾ ಆರೋಗ್ಯ ಅಧೀಕ್ಷಕ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ.

ಎಲ್ಲ ನರ್ಸಿಂಗ್ ಸಂಸ್ಥೆಗಳಲ್ಲಿ ಮೂರು ತಿಂಗಳ ಆಸ್ಪತ್ರೆಯಲ್ಲಿ ತರಬೇತಿ ಕಡ್ಡಾಯವಾಗಿದ್ದು ಇದಕ್ಕೆ ಜಿಲ್ಲಾ ಆರೋಗ್ಯ ಅಧೀಕ್ಷಕರು ಅನುಮತಿ ನೀಡಬೇಕು. ಈ ಅನುಮತಿ ನೀಡಲು ಕೃಷ್ಣಮೂರ್ತಿ ಲಂಚ ಕೇಳಿದ್ದ ಬಗ್ಗೆ ವೆಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಪಿಆರ್ ನರ್ಸಿಂಗ್ ಸಂಸ್ಥೆಯ ಪ್ರಾಚಾರ್ಯೆ ಶರಣ್ಯ ಅವರು ವಿಜಿಲೆನ್ಸ್‌ ಗೆ ದೂರು ಸಲ್ಲಿಸಿದ್ದರು.

ಕೃಷ್ಣಮೂರ್ತಿ ನರ್ಸಿಂಗ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಲಂಚದ ಹಣವನ್ನೂ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ಮುಂದುವರಿದಿದೆ.

https://pragati.taskdun.com/a-candidate-who-forgets-to-sign-the-nomination-paper/
https://pragati.taskdun.com/car-accidenthusbandwifedeathchildren-injuerd/
https://pragati.taskdun.com/acceptance-of-nomination-papers-of-bjp-candidate-ratna-mamani/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button