ಮಾಡಾಳ ವಿರೂಪಾಕ್ಷಪ್ಪ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಲಂಚ ಹಾಗೂ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ.
ವಿರೂಪಾಕ್ಷಪ್ಪ ಅವರು ಪುತ್ರ, ಕೆಎಎಸ್ ಅಧಿಕಾರಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ನಂತರ ಅವರ ಮನೆಯನ್ನು ಶೋಧಿಸಿದಾಗ 8 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪುತ್ರ ಪ್ರಶಾಂತನನ್ನು ಈಗಾಗಲೆ ಬಂಧಿಸಲಾಗಿದೆ. ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾದ ದಿನ ಮೆರವಣಿಗೆಯಲ್ಲಿ ಕರೆದೊಯ್ಯಲಾಗಿತ್ತು. ಇದೀಗ ವಿರೂಪಾಕ್ಷಪ್ಪ ಅವರ ಜಾಮೀನು ವಿಸ್ತರಣೆ ಮಾಡಲು ಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೋಲೀಸರು ಅವರನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಅವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ತುಮಕೂರು ಬಳಿ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.




