Latest

ವಾರಾಂತ್ಯದಲ್ಲಿ ಹೀಗಿದೆ ಚಿನ್ನ, ಬೆಳ್ಳಿ ದರ…

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕಳೆದ ಎರಡು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡುಬಂದಿತ್ತು.ಆದರೆ ವಾರಾಂತ್ಯ ದಿನವಾದ ಇಂದು ಚಿನ್ನದ ದರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸ್ಥಿರತೆ ಕಂಡುಬಂದಿದೆ.

ದೈನಂದಿನ ದರ ಬದಲಾವಣೆಯಲ್ಲಿ ಆಭರಣಗಳ ಬೆಲೆ ಯಾವ ನಗರದಲ್ಲಿ ಎಷ್ಟಿದೆ ಇಲ್ಲಿದೆ ಮಾಹಿತಿ.

Home add -Advt

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 43,900 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,39,000 ರೂ ನಿಗದಿಯಾಗಿದೆ.

24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸ್ಥಿರತೆ ಕಂಡುಬಂದಿದೆ.

ಬೆಳ್ಳಿದರದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದ್ದು, ಇಂದು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 65,900 ರೂಪಾಯಿ ಇದೆ. ದೈನಂದಿನ ದರದಲ್ಲಿ ಸುಮಾರು 4,500 ರೂ ಏರಿಕೆಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,800 ರೂ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 48,410 ರೂ ಆಗಿದ್ದು, 100 ಗ್ರಾಂ ಚಿನ್ನ 4,84,100 ರೂ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,900 ರೂ ಆಗಿದೆ.

ಇನ್ನು ಮುಂಬೈ, ಜೈಪುರ, ಹೈದರಾಬಾದ್ ಮೊದಲಾದ ನಗರಗಳಲ್ಲಿ ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿದೆ.

ರಾಜ್ಯದಲ್ಲಿ ಮೊದಲ ಬಾರಿಗೆ ಶತಕ ಬಾರಿಸಿದ ಡೀಸೆಲ್ ದರ

Related Articles

Back to top button