ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಕುರಿತು ಜಾತಿ ಹಾಗೂ ಧರ್ಮ ನಿಂದನೆ ಮಾಡಿದ ಆರೋಪದಲ್ಲಿ ಬಲಪಂಥೀಯ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಮುಖ್ಯಸ್ಥ ಪುನಿತ್ ಕೆರೆಹಳ್ಳಿ ಬಂಧಿಸಲಾಗಿದೆ.
ಬುಧವಾರ ಸಂಜೆ ಪುನಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ರಾತ್ರಿ ಚಾಮರಾಜ ಪೇಟೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ನವೆಂಬರ್ 11 ರಂದು ಸಾಮಾಜಿಕ ಜಾಲತಾಣದಲ್ಲಿ ಜಮೀರ್ ಅಹ್ಮದ್ ಖಾನಿ ಕುರಿತು ಧರ್ಮ ಹಾಗೂ ಜಾತಿ ನಿಂದನೆ ಮಾಡಿದ್ದಾರೆ. ಧರ್ಮ ಧರ್ಮದ ಮಧ್ಯೆ ಧ್ವೇಷದ ಬೀಜ ಬಿತ್ತಿದ್ದಾರೆ. ಪದೇ ಪದೆ ಸಚಿವರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ದೂರಲಾಗಿತ್ತು.
ಜಮೀರ್ ಅಹ್ಮದ್ ಖಾನ್ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್ ಐ ಆರ್ ದಾಖಲಾಗಿದೆ.
ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ತಮ್ಮ ಸಾಮಾಜಿಕ ಜಾಲ ತಾಣದ ಫೇಸ್ ಬುಕ್ ಲಿಂಕ್ ನಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿರುತ್ತಾರೆ. ಧರ್ಮ -ಧರ್ಮ ಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಕಾರಿ ಹೇಳಿಕೆ ನೀಡಿರುತ್ತಾರೆ.
ಪದೇ ಪದೇ ಅವಾಚ್ಯ ಶಬ್ದ ಗಳಿಂದ ಸಚಿವರನ್ನು ನಿಂದಿಸಿರುತ್ತಾರೆ. ಜೊತೆಗೆ ಪ್ರಾಣ ಬೆದರಿಕೆ ಸಹ ಹಾಕಿರುತ್ತಾರೆ. ಹೀಗಾಗಿ ಕೂಡಲೇ ಎಫ್ ಐ ಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿತ್ತು.
ರಾತ್ರಿಯೇ ಚಾಮರಾಜ ಪೇಟೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ