*ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೊರರನ್ನು ಮೊದಲು ಒದ್ದು ಒಳಗೆ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ *ಪಾಕಿಸ್ತಾನ್ ಜಿಂದಾಬಾದ್* ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.
ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಜೋಶಿ ಅತ್ಯುಗ್ರವಾಗಿ ಖಂಡಿಸಿದ್ದಾರೆ.
ಈ ಕೂಡಲೇ ರಾಜ್ಯ ಪೊಲೀಸ್ ಇಲಾಖೆ ಮತ್ತು ಗೃಹ ಇಲಾಖೆ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
*ರಾಹುಲ್ ಗಾಂಧಿ ಏನು ಹೇಳ್ತಾರೆ?*
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಾಮಾನ್ಯ ಸಂಗತಿಯಲ್ಲ. ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ ಸ್ಪಷ್ಟಪಡಿಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗೆ, ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ಪ್ರಹ್ಲಾದ ಜೋಶಿ ಹರಿ ಹಾಯ್ದಿದ್ದಾರೆ.
*ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ*
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು ಪಾಕಿಸ್ತಾನ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಸಹಾಯ, ಬೆಂಬಲ ಇದೆ ಎಂಬುದನ್ನು ತೋರಿಸುತ್ತದೆ. ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಖಂಡನೀಯ – ಅಶೋಕ
ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಈ ಘಟನೆ ಕಾಂಗ್ರೆಸ್ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?
ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ? ಎಂದು ಪ್ರಶ್ನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ