Kannada NewsKarnataka NewsPolitics

*ನಂದಿನಿ ನಾಗರಾಜ್ ಗೆ ಶೋಕಾಸ್ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಹೆಚ್.ಎಂ.ರೇವಣ್ಣ ವಿರುದ್ಧ ಜಾತಿ ನಿಂದನೆ, ಹಲ್ಲೆ ಆರೋಪ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಗೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Home add -Advt

ನಂದಿನಿ ನಾಗರಾಜ್, ಹೆಚ್.ಎಂ.ರೇವಣ್ಣ ವಿರುದ್ಧ ಹಲ್ಲೆ ಆರೋಪ, ಜಾತಿ ನಿಂದನೆ ಆರೋಪ ಮಾಡಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರಿಗೂ ದೂರು ನೀಡಿದ್ದರು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಕಮಿಟಿ ನಂದಿನಿ ನಾಗರಾಜ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಸೂಕ್ತ ಉತ್ತರ ನೀಡುವವರೆಗೂ ಹುದ್ದೆಯಿಂದ ಸಸ್ಪೆಂಡ್ ಮಾಡಿರುವುದುದಾಗಿ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಹಣಕಾಸು ಸೇವೆಗಳ ಮುಖ್ಯಸ್ಥ ಟಿ.ಸುರೇಶ್ ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ಹಣ ವಸೂಲಿ ಸೇರಿದಂತೆ ಹಲವು ಆರೋಪಗಳನ್ನು ಸಹ ಅವರ ವಿರುದ್ಧ ಮಾಡಲಾಗಿದೆ.

Related Articles

Back to top button