Kannada NewsKarnataka News

*ಅಮೆಜಾನ್ ಗೆ ಲಕ್ಷ ಲಕ್ಷ ಪಂಗನಾಮ ಹಾಕುತ್ತಿದ್ದ ಐನಾತಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಉರ್ವಾ ಠಾಣೆ  ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.‌ ಪ್ರತಿಷ್ಠಿತ ಅಮೆಜಾನ್ ಇ ಕಾಮರ್ಸ್ ಕಂಪನಿಗೆ 30 ಕೋಟಿ ವಂಚಿಸಿದ್ದ ಖತರ್ನಾಕ್ ವಂಚಕರನ್ನು ಬಂಧಿಸಿದ್ದಾರೆ.

ರಾಜಸ್ಥಾನದಿಂದ ಬಂದ ಇಬ್ಬರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಅಮೆಜಾನ್‌ಗೆ 30 ಕೋಟಿ ರೂಪಾಯಿಗಳ ವಂಚನೆ ಮಾಡಿದ ಆರೋಪ ಇಬ್ಬರ ಮೇಲಿದೆ. ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾ‌ರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತರು.

ಆರೋಪಿಗಳು ಅಮೆಜಾನ್‌ನಲ್ಲಿ ವಿವಿಧ ರೀತಿಯ ಬೆಲೆಬಾಳುವ ಸಾಮಗ್ರಿಗಳನ್ನು ಆರ್ಡರ್ ಮಾಡುತ್ತಿದ್ದರು. ವಸ್ತುಗಳ ಡಿಲೇವರಿ ಪಡೆಯಲು ಟೈಯರ್ ಟು ಸಿಟಿ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು ವಿಮಾನದಲ್ಲಿ ಹೋಗುತ್ತಿದ್ದರು. ವಸ್ತುವಿನ ಬಾಕ್ಸ್ ಮೇಲಿನ ಟ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ ಅಮೆಜಾನ್ ಸಂಸ್ಥೆಗೆ ವಂಚಿಸುತಿದ್ದರು.

ವಸ್ತುಗಳು ಡೆಲವರಿಯಾದ ಬಳಿಕ, ಅದರ ಮೇಲಿನ ಟ್ಯಾಕಿಂಗ್ ಲೇಬಲ್‌ಗಳನ್ನು ಅದೇ ರೀತಿಯ ಕಡಿಮೆ ಬೆಲೆಯ ವಸ್ತುಗಳ ಬಾಕ್ಸ್ ಮೇಲೆ ಹಚ್ಚುತ್ತಿದ್ದರು. ನಂತರ, ರಿಟರ್ನ್ ಮಾಡುತ್ತಿದ್ದರು. ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇಟ್ಟುಕೊಂಡು ವಂಚಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Home add -Advt

Related Articles

Back to top button