Kannada NewsKarnataka NewsLatest

*ಸಿಮೆಂಟ್ ಮಿಕ್ಸರ್ ಲಾರಿ-ಬೈಕ್ ನಡುವೆ ಅಪಘಾತ: ಗರ್ಭಿಣಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಘಟನೆ ನಡೆದಿದೆ. ವೀರನಗರ ನಿವಾಸಿ ಮಾನಸ ಮೃತ ಗರ್ಭಿಣಿ. ಸಿಇಟಿ ಪರೀಕ್ಷೆಗೆಂದು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಮಾನಸಾ ಮೇಲೆಯೇ ಲಾರಿ ಹರಿದು ಹೋಗಿದೆ.

Home add -Advt

ಸ್ಥಳದಲ್ಲೇ ಮಾನಸ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಿಮೆಂಟ್ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಜಾಲ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button