
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಿಸಲಾಗಿದ್ದು, ಆರ್ಥಿಕ ಸಂಕಷ್ತದಲ್ಲಿರುವ ಕಲಾವಿದರಿಗೆ ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೆಜ್ ಘೋಷಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರಿಗೆ ತಲಾ 3,000 ರೂಪಾಯಿಯನ್ನು ನೀಡಲು ನಿರ್ಧರಿಸಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಎಲಾ ಕಲಾವಿದರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಬೆಳಗವೈ ನಿರ್ದೇಶಕರು ತಿಳಿಸಿದ್ದಾರೆ.
ಕಲಾವಿದರು ವೃತ್ತಿನಿರತರಾಗಿದ್ದು, 35 ವರ್ಷ ಮೇಲ್ಪಟ್ಟವರಾಗಿರಬೇಕು. ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು. ಯಾವುದೇ ಸರ್ಕಾರಿ ನೌಕರರಾಗಿರಬಾರದು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಾವುದೇ ಮಾಸಾಶನ ಪಡೆಯುತ್ತಿರಬಾರದು ಈ ಇಂತಹ ಕಲಾವಿದರು ತಮ್ಮ ಸವರಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಕಛೇರಿಯನ್ನು
ಸಂಪರ್ಕಿಸಬಹುದು.
ಕಛೇರಿ ದೂರವಾಣಿ ಸಂಖ್ಯೆ : 0831-2474649, ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ : 9481527368 ಅಥವಾ ಸಿಬ್ಬಂದಿ ಮೊಬೈಲ್ ಸಂಖ್ಯೆ : 9632215376 / 8792426821 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಖಡಕ್ ವಾರ್ನಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ