Karnataka NewsLatestPolitics

*ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ 47 ವರ್ಷದ ಮಹಿಳೆ ಗಂಭೀರ ಆರೋಪ ಮಾಡಿದ್ದು, ದಕ್ಷಿಣ ಕನ್ನಡ ಮಹಿಳಾ ಪೊಲಿಸ್ ಥಾಣೆಯಲ್ಲಿ ದೂರು ದಾಖಲಾಗಿದೆ.

Home add -Advt

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅರುಣ್ ಕುಮಾರ್ ಪುತ್ತಿಲ, ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಕೃತ್ಯದ ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐಆರ್ ದಾಖಲಾಗಿದೆ.


Related Articles

Back to top button