ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 2023ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಕೋರ ಕಮಿಟಿ ಮೀಟಿಂಗ್ ಮೊದಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಗೆ ಲೀಡರ್ ಇಲ್ಲದ ಪಾರ್ಟಿ . ಕರ್ನಾಟಕದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ. ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ತರ ಬಳಕೆ ಮಾಡಿಕೊಂಡು ಬೇರೆ ರಾಜ್ಯಗಳಲ್ಲೂ ಗೆಲವು ಸಾಧಿಸಬೇಕೆಂಬ ಕನಸು ಕಾಣುತ್ತಿದೆ. ರಾಜ್ಯದ ಎಟಿಎಂ ಆಗಲು ಬಿಡುವುದಿಲ್ಲ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದರು.
ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಸತತ ಎರಡು ಬಾರಿ ಗೆಲುವು ಸಾಧಿಸಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಎರಡನೇ ಬಾರಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಸಂಪೂರ್ಣ ಬಹುಮತದ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದ ಸಮಾನ್ಯ ಜನ, ಬಡವರು, ರೈತರು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಇದ್ದಾರೆ. ಕಾಂಗ್ರೆಸ್ ಪಂಚರಾಜ ಚುನಾವಣೆಯಲ್ಲಿ ಹೆಸರು ಇಲ್ಲದೆ ಹೋಗಿದೆ. ಕಾಂಗ್ರೆಸ್ ಗ ನಾಯಕತ್ವ ಇಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ. ಬಡವರು, ಸಾಮಾನ್ಯ ವರ್ಗ ಹಾಗೂ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು.
ಉತ್ತರ ಕರ್ನಾಟಕದ ಮಹದಾಯಿ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು ಎಂದು ಅವರು ತಿಳಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಸಂಸದೆ ಮಂಗಲಾ ಅಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ