Latest

ಸಿಎಂ ಬೊಮ್ಮಾಯಿಗೆ ಅರುಣ್ ಸಿಂಗ್ ಫುಲ್ ಮಾರ್ಕ್ಸ್; ಬಿಎಸ್ ವೈ ಪ್ರವಾಸಕ್ಕೂ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬೊಮ್ಮಾಯಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ದಾವಣಗೆರೆಯಲ್ಲಿ ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇಂದು ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅರುಣ್ ಸಿಂಗ್, ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಎಲ್ಲಾ ಜನರನ್ನು ಸಮರ್ಪಕವಾಗಿ ನಿಭಾಯಿಸಿ ಒಗ್ಗಟ್ಟಿನಿಂದ ಕರೆದುಕೊಂಡು ಹೋಗುವ ಕೆಲಸ ನಡೆಯುತ್ತಿದೆ. ಮುಂಬರುವ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದರು.

Home add -Advt

ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಾ ರಾಜ್ಯ ಪ್ರವಾಸಕ್ಕೆ ಅನುಮತಿ ಪಡೆಯುವ ಅಗತ್ಯವಿಲ್ಲ. ಅವರು ಹಿರಿಯ ನಾಯಕರು, ಪಕ್ಷ ಸಂಘಟನೆಗಾಗಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಬಹುದಾಗಿದೆ ಎಂದು ಹೇಳಿದರು.

ನಾಳೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ, ಕೈಗೊಳ್ಳಬೇಕಿರುವ ಕಾರ್ಯಕ್ರಮಗಳು, ಚುನಾವಣೆ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು.
ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಫೀವರ್, ನ್ಯೂಮೋನಿಯಾ; ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಪರದಾಟ

Related Articles

Back to top button