ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಸೇವೆಯೇ ಸಂಘಟನೆ ಎಂಬುದು ನಮ್ಮ ಧೇಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ಚರ್ಚೆ ವಿಚಾರದ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸಿರುವ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊರೊನಾ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೀವದ ಹಂಗು ತೊರೆದು ಕೆಲಸ ಮಾಡಿದ್ದು, ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಕೇವಲ ಆರೋಪಗಳನ್ನು ಮಾಡುವುದರಲ್ಲಿ ಕಾಲಹರಣ ಮಾಡಿದ್ದು, ಜೆಡಿಎಸ್ ನವರು ಕ್ವಾರಂಟೈನ್ ಆಗಿದ್ದರು. ಇದೆಲ್ಲವೂ ರಾಜ್ಯದ ಜನರಿಗೆ ತಿಳಿದಿದೆ ಎಂದರು.
ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಪಕ್ಷದ ಮುಂದಿನ ಕಾರ್ಯಕ್ರಮದ ಬಗ್ಗಷ್ಟೇ ಮಾಹಿತಿ ನೀಡಿದ್ದು, ಅಂತರಾಷ್ಟ್ರೀಯ ಯೋಗದಿನವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿಗೆ ಬಂದಿಳಿದ ಅರುಣ್ ಸಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ