ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅರುಣ್ ಸಿಂಗ್ ಆಗಮನಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ, ಅರುಣ್ ಸಿಂಗ್ ಸಹಜವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಜಿಲ್ಲೆಗಳಿಗೂ ಭೇಟಿ ನೀಡಿ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಈ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16ಕ್ಕೆ ರಾಜ್ಯಕ್ಕೆ ಅಗಮಿಸಲಿದ್ದು, ಜೂನ್ 18ರವರೆಗೂ ವಾಸ್ತವ್ಯ ಹೂಡಲಿದ್ದಾರೆ. ಈ ನಡುವೆ ಅಸಮಾಧಾನಿತ ಬಿಜೆಪಿ ಸಚಿವರು, ಶಾಸಕರು ಅರುಣ್ ಸಿಂಗ್ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸೆಲ್ಫಿ ತೆಗೆಯಲು ಹೋಗಿ ಸಮುದ್ರದಲ್ಲಿ ಕೊಚ್ಚಿ ಹೋದ ಯುವಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ