
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಯಕತ್ವ ಬದಲಾವಣೆ ಕೂಗು ಹೆಚ್ಚುತ್ತಿದ್ದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅರುಣ್ ಸಿಂಗ್ ಅವರನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ನಾಯಕತ್ವ ಬದಲಾವಣೆ ಚರ್ಚೆ ಹೆಚ್ಚಿದ ಹಿನ್ನೆಲೆಯಲ್ಲಿ ಸಚಿವರು, ಶಾಸಕರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಹಾಗೂ ಬಿಜೆಪಿಯಲ್ಲಿನ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿ ಅರುಣ್ ಸಿಂಗ್ ಮೂರುದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ.
ಅರುಣ್ ಸಿಂಗ್ ಆಗಿಸುತ್ತಿದ್ದಂತೆ ಬಿಜೆಪಿ ಚಟುವಟಿಕೆ ಚುರುಕುಗೊಂಡಿದ್ದು, ಒಂದೆಡೆ ಸಿಎಂ ವಿರೋಧಿ ಬಣಗಳು ಸಭೆ ನಡೆಸಿದ್ದರೆ ಇನ್ನೊಂದೆಡೆ ಸಿಎಂ ಆಪ್ತ ಬಣಗಳು ತಂತ್ರಗಾರಿಕೆ ಹೆಣೆಯುತ್ತಿದ್ದು, ಬಿಜೆಪಿ ಕಚೇರಿಯತ್ತ ದೌಡಾಯಿಸಿದ್ದಾರೆ.
ಬಿ.ವೈ ವಿಜಯೇಂದ್ರನೆ ಸಿಎಂ; ಅನುಮಾನವೇ ಇಲ್ಲ; ಅಚ್ಚರಿ ಮೂಡಿಸಿದ ಕೈ ಮಾಜಿ ಶಾಸಕನ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ